ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರಿಗೆ ನರೇಂದ್ರ ಮೋದಿ- ಅಮಿತ್ ಶಾರನ್ನು ಕಂಡ್ರೆ ಭಯ.

ಆದುದರಿಂದ ಪರಿಹಾರ ಬಿಡುಗಡೆ ಮಾಡಿ ಎಂದು ಆಗ್ರಹಿಸಿಯೇ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಒಂದು ವೇಳೆ ಪರಿಹಾರಕ್ಕೆ ಆಗ್ರಹಿಸಿದ್ದರೆ, ಎಷ್ಟು ಹಣ ಕೇಳಿದ್ದಾರೆ ಎಂದು ಯಡಿಯೂರಪ್ಪ ಬಹಿರಂಗಪಡಿಸಲಿ ಎಂದು ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.
ನೆರೆ ಹಾನಿ ಪ್ರದೇಶಗಳ ಕುರಿತು ಸುದೀರ್ಘವಾಗಿ ಪ್ರಧಾನಿ ಮತ್ತು ಗೃಹಸಚಿವರ ಜೊತೆ ಚರ್ಚೆ ಮಾಡಲಾಗಿದೆ. ಎರಡು ಅಥವಾ ಮೂರು ದಿನದಲ್ಲಿ ಪರಿಹಾರ ಕಾರ್ಯ ಚುರುಕಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ನಗದರಲ್ಲಿ ಮಾತನಾಡಿದ ಬಿಎಸ್ವೈ, ನೆರೆ ಪೀಡಿತರಿಗೆ 10 ಸಾವಿರ ಒಂದೊಂದು ಕುಟುಂಬಕ್ಕೆ ನೀಡಿಕೆಯಲ್ಲಿ ವಿಳಂಬವಾಗಿದೆ. ಇದರ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ.
ನೆರೆ ಪೀಡಿತರ ಕಷ್ಟಕ್ಕೆ ತಕ್ಷಣ ಸ್ಪಂದಿಸುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯ. ಪ್ರವಾಹ ಸಂತ್ರಸ್ತರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು. ಸರ್ಕಾರ ಸದಾ ನಿಮ್ಮ ಜೊತೆಯಲ್ಲಿದೆ ಎಂದು ಹೇಳಿದರು.