ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂಬ ಹೇಳಿಕೆ ನೀಡುತ್ತಿರೋದೇಕೆ? ಇಲ್ಲಿವೆ ಪ್ರಮುಖ ಕಾರಣಗಳು

ಪ್ರತಿಪಕ್ಷ ಬಿಜೆಪಿಯಲ್ಲಿ ಮುಂದಿನ ರಾಜ್ಯಾಧ್ಯಕ್ಷರ ಬಗ್ಗೆ ಬಿರುಸಿನ ಚರ್ಚೆ ಆರಂಭವಾಗಿರುವಂತೆಯೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಭರದ ಚರ್ಚೆ ಶುರುವಾಗಿದೆ. ಅಷ್ಟಕ್ಕೂ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಹೇಳಿಕೆ ನೀಡುತ್ತಿರೋದೇಕೆ? ಇಲ್ಲಿವೆ 5 ಕಾರಣಗಳು

ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್‌ ಶಾಸಕರ ಅಸಮಾಧಾನದಿಂದ ರಾಜ್ಯದ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಅಪಾಯಕ್ಕೆ ಸಿಲುಕಿದರೆ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಮುಖ್ಯಮಂತ್ರಿ ಹುದ್ದೆಯನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಬಹುದು. ಹಾಗೆ ಬಿಟ್ಟು ಕೊಡುವಾಗ ಅವರು ಸಹಜವಾಗಿಯೇ ಉಪಮುಖ್ಯಮಂತ್ರಿಯಾಗಿರುವ ಡಾ| ಜಿ.ಪರಮೇಶ್ವರ್‌ ಅವರನ್ನು ಸೂಚಿಸಬಹುದು ಎಂಬ ವದಂತಿಯಿದೆ.

ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಬೇರೊಬ್ಬರಿಗೆ ಮುಂದಿನ ಮುಖ್ಯಮಂತ್ರಿ ಸ್ಥಾನ ದಕ್ಕಬಾರದು ಎಂಬ ಒತ್ತಾಸೆ ಅವರ ಬೆಂಬಲಿಗರಲ್ಲಿ ಬಲವಾಗಿ ಇದ್ದಂತಿದೆ. ಹೀಗಾಗಿ, ಇದಕ್ಕೆ ಈಗಿನಿಂದಲೇ ವೇದಿಕೆ ಸಿದ್ಧಗೊಳಿಸುವುದರಲ್ಲಿ ನಿರತರಾಗಿರಬಹುದು

ತಮ್ಮದು ದೊಡ್ಡ ಪಕ್ಷವಾದರೂ ಕಡಿಮೆ ಶಾಸಕರ ಬಲ ಹೊಂದಿರುವ ಜೆಡಿಎಸ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದರ ಬಗ್ಗೆ ಕಾಂಗ್ರೆಸ್‌ನಲ್ಲಿ ಆರಂಭದಿಂದಲೂ ಅತೃಪ್ತಿ ಇದ್ದೇ ಇದೆ. ಜೊತೆಗೆ ಕಾಂಗ್ರೆಸ್ಸಿನ ಕೆಲವು ಶಾಸಕರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಕಾರ್ಯವೈಖರಿ ಬಗ್ಗೆ ಆಗಾಗ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಹೀಗಾಗಿ, ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಆಧರಿಸಿ ರಾಜ್ಯದಲ್ಲಿ ಒಂದು ವರ್ಷದಿಂದ ಜೆಡಿಎಸ್‌ಗೆ ನೀಡಿರುವ ಬೆಂಬಲದಲ್ಲಿ ತುಸು ಮಾರ್ಪಾಡು ಮಾಡಲು ಕಾಂಗ್ರೆಸ್‌ ನಾಯಕರು ಬಯಸಿರಬಹುದು.

ಕಾಂಗ್ರೆಸ್‌ನ ಅತೃಪ್ತ ಶಾಸಕರ ಪೈಕಿ ಬಹುತೇಕರು ಸಿದ್ದರಾಮಯ್ಯ ಅವರ ಬಗ್ಗೆ ವಿಶ್ವಾಸ ಮತ್ತು ಒಲವು ಹೊಂದಿದ್ದಾರೆ. ಸಿದ್ದರಾಮಯ್ಯ ಅವರೇ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂಬ ಸುದ್ದಿ ದಟ್ಟವಾದರೆ ಕಾಂಗ್ರೆಸ್‌ ಪಕ್ಷದಲ್ಲಿನ ಅತೃಪ್ತ ಶಾಸಕರೂ ಸದ್ಯಕ್ಕೆ ಸಮಾಧಾನಗೊಳ್ಳಬಹುದು. ಬಿಜೆಪಿಗೆ ವಲಸೆ ಹೋಗಲು ಮನಸ್ಸು ಮಾಡುತ್ತಿರುವ ಶಾಸಕರು ತಮ್ಮ ನಿಲುವನ್ನು ಕೈಬಿಟ್ಟು ಕಾಂಗ್ರೆಸ್‌ನಲ್ಲೇ ಉಳಿಯುವ ಮನಸ್ಸು ಮಾಡಬಹುದು ಎಂಬ ಲೆಕ್ಕಾಚಾರವೂ ಇರಬಹುದು.

ಒಂದು ವೇಳೆ ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಸ್ಥಾನ ಲಭಿಸಬಹುದಾದಲ್ಲಿ ಆಗ ಪಕ್ಷದ ವರಿಷ್ಠರು ಬೇರೊಬ್ಬ ನಾಯಕನನ್ನು ಆ ಸ್ಥಾನದಲ್ಲಿ ತಂದು ಕೂರಿಸುವ ಬಗ್ಗೆ ಯೋಚನೆ ಮಾಡದಂತೆ ತಡೆ ಹಾಕುವ ಸಲುವಾಗಿ ಈಗಿನಿಂದಲೇ ಸಿದ್ದರಾಮಯ್ಯ ಅವರ ಹೆಸರನ್ನು ಅವರ ಬೆಂಬಲಿಗರು ಪದೇ ಪದೇ ಪ್ರಸ್ತಾಪ ಮಾಡುತ್ತಿರಬಹುದು.

ಸಿದ್ದರಾಮಯ್ಯರನ್ನು ರಾಜಕೀಯವಾಗಿ ನಿವೃತ್ತಿ ಕೊಡಿಸಲು : ಡಿಕೆಶಿ-ಹೆಚ್ಡಿಕೆ ಮಾಸ್ಟರ್ ಪ್ಲಾನ್

ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತವೆ ಎಂದು ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಈಗ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್ ಒಂದಾಗಿದ್ದಾರೆ. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ ಬಿಜೆಪಿಗೆ ಉತ್ತರ ಕರ್ನಾಟಕ ಭಾಗ ಭದ್ರ ನೆಲೆಯಾಗಿದೆ. ಹಾಗಾಗಿ ಈ ಭಾಗದ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮತ್ತು ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಅವರು ಒತ್ತಾಯಿಸಿದರು. ಗೋವಿಂದ ಕಾರಜೋಳ, ನಾನೂ ಸೇರಿದಂತೆ ಹಲವಾರು ಮಂದಿ ಇದ್ದು, ಅವಕಾಶ ಸಿಕ್ಕರೆ ಜವಾಬ್ದಾರಿ ನಿಭಾಯಿಸುತ್ತೇವೆ ಎಂದರು.

ಪ್ರಾದೇಶಿಕ ಅಸಮಾನತೆ ನಿವಾರಣೆಯಾಗಬೇಕಾದರೆ ಮುಖ್ಯಮಂತ್ರಿ ಹುದ್ದೆಯೂ ಉತ್ತರ ಕರ್ನಾಟಕ ಭಾಗಕ್ಕೆ ಸಿಗಬೇಕು. ಮಂಡ್ಯ ಜಿಲ್ಲೆಗೆ 8 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗಕ್ಕೆ ಕೇವಲ 2 ಸಾವಿರ ಕೋಟಿ ರೂ.ಗಳನ್ನು ಕೊಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶದಲ್ಲಿ 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗುತ್ತಾರೆ. ಹಾಗೆಯೇ ಕರ್ನಾಟಕದಲ್ಲಿ 22 ರಿಂದ 23 ಸೀಟುಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ ಎಂದು ಹೇಳಿದರು.

ಕಾಂಗ್ರೆಸ್, ಟಿಡಿಪಿ ಸೇರಿದಂತೆ 21 ವಿಪಕ್ಷಗಳಿಗೆ ಭಾರೀ ಹಿನ್ನಡೆ!

ಲೋಕಸಭಾ ಚುನಾವಣೆಗೆ ಇನ್ನೆರಡು ಹಂತಗಳು ಬಾಕಿಯಿವೆ. ಮತ ಎಣಿಕೆ ವೇಳೆ ವಿವಿಪ್ಯಾಟ್ ಎಣಿಕೆಯನ್ನು ಹೆಚ್ಚಿಸಬೇಕೆಂದು ವಿಪಕ್ಷಗಳು ಸಲ್ಲಿಸಿದ್ದ ಮರು-ಪರಿಶೀಲನಾ ಅರ್ಜಿಯನ್ನು  ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಕಾಂಗ್ರೆಸ್, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸೇರಿದಂತೆ 21 ವಿಪಕ್ಷಗಳು ಸುಪ್ರೀಂ ಮೊರೆ ಹೋಗಿದ್ದುವು.

ಏಪ್ರಿಲ್ 9ರಂದು ಸುಪ್ರೀಂ ಕೋರ್ಟ್ ಗೆ ಚಂದ್ರಬಾಬು ನಾಯ್ಡು ಅವರು ಒಳಗೊಂಡಂತೆ 21 ರಾಜಕೀಯ ಪಕ್ಷಗಳು ವಿವಿವ್ಯಾಟ್ ಕೌಂಟಿಂಗ್ ಇರುತ್ತದೆ ಅದನ್ನು ಶೇಕಡ 50 ಏರಿಸಬೇಕೆಂದು ಅರ್ಜಿ ತಿರಸ್ಕರಿಸಲಾಗಿತ್ತು. ನಂತರ ಮರು ಪರಿಶೀಲನಾ ಅರ್ಜಿ ವಿಚಾರಣೆಗೆ ಒಪ್ಪಿದರೂ ಕೂಡ ಸುಪ್ರೀಂ ಕೋರ್ಟ್ ಇವತ್ತು ಅದನ್ನು ವಜಾ ಮಾಡಲಾಗಿದೆ.

ಪ್ರಮುಖವಾಗಿ ಸುಪ್ರೀಂಕೋರ್ಟ್ ಒಂದು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಹೇಳಿದ್ದು ರ್ಯಡಮ್ ಆಗಿ ಈಗ ಎಲೆಕ್ಷನ್ ಕಮಿಷನ್ ಪ್ರತಿ ಅಸೆಂಬ್ಲಿ ಸ್ಟೇಟ್ಮೆಂಟ್ನಲ್ಲಿ ಒಂದು ಬೂತ್ನ ವಿವಿಪ್ಯಾಟ್ ಸಂಪೂರ್ಣವಾಗಿ ಬಳಕೆ ಮಾಡುತ್ತದೆ ಅದನ್ನು ಶೇ 5% ಏರಿಸಬೇಕೆಂದು ಸುಪ್ರೀಂ ಕೋರ್ಟ್ ಕಡತ್ತ ದೇಶ ನೀಡಿತ್ತು .

ಚಂದ್ರವ್ವ ನಾಡು ಬರುವುದನ್ನು ಶೇಕಡ 50ರಷ್ಟು ಏರಿಸಬೇಕು ಇಲ್ಲವಾದರೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 125 ಬೂತುಗಳಲ್ಲಿ ವಿವಿಪ್ಯಾಟ್ ಕೌಂಟಿಂಗ್ ಕೂಡ ಆಗಬೇಕು ಅಂತ ಸ್ಪಷ್ಟವಾಗಿ ಸುಪ್ರೀಂ ಕೋರ್ಟಿಗೆ ಕೇಳಿದರು.

ಸುಪ್ರೀಂಕೋರ್ಟ್ ಇದನ್ನು ಒಪ್ಪಲಿಲ್ಲ ಏಕೆಂದರೆ ಕೇಂದ್ರ ಚುನಾವಣಾ ಆಯೋಗ ಕೂಡ ಇದನ್ನು ತುಂಬಾ ತಡವಾಗಿ ಫಲಿತಾಂಶ ಕೊಡುತ್ತದೆ ಕಾರಣವಾಗುತ್ತೆ ರಾಂಡಮ್ ಆಗಿ ವಿವಿಪ್ಯಾಡ್ ಬಳಕೆ ಮಾಡಬಹುದು. ಅದನ್ನು ಕೌಂಟಿಂಗ್ ಗೆ ಬಳಸಬಹುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿತ್ತು.

ರಾಜಕೀಯ ಪಕ್ಷಗಳು ಒಪ್ಪಿಕೊಂಡಿರಲಿಲ್ಲ ಏಕೆಂದರೆ ದೇಶದ ಪ್ರಜಾಪ್ರಭುತ್ವ ವಿವಿ ಟ್ಯಾಪ್ ಅನ್ನು ಪ್ರೋಗ್ರಾಂಗಳು ಕೈಯಲ್ಲಿ ಬಿಡುವುದಕ್ಕೆ ಸಾಧ್ಯವಿಲ್ಲ. ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ವಜಾ ಮಾಡಲಾಗಿದೆ ಪಕ್ಷಗಳಿಗೆ ಚುನಾವಣಾ ಸಂದರ್ಭದಲ್ಲಿ ಭಾರಿ ಹಿನ್ನಡೆ ಉಂಟಾಗಿದೆ.